ಕಡಬ: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಪರಸ್ಪರ ಡಿಕ್ಕಿಯಾದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಬಳಿ ನಡೆದಿದೆ. ಘಟನಾನುಸಾರವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 4 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಕಡಬ ತಾಲೂಕು ಆಲಂಕಾರು ನಿವಾಸಿಗಳಾದ ಪದ್ಮನಾಭ, ಸುದರ್ಶನ್, ಚೇತನ್, ಸತೀಶ್ ಎಂದು ಎನ್ನಲಾಗಿದೆ. ಗಾಯಗೊಂಡವರ ಪೈಕಿ ಗಂಭೀರ ಗಾಯಗಳಾಗಿರುವ ಪದ್ಮನಾಭರವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ ಮೂಲದ ಯಾತ್ರಿಕರು ಟೆಂಪೋ ಟ್ರಾವೆಲರ್‌ನಲ್ಲಿ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಮಾಡಿ ಅಲ್ಲಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್‌ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ತರಚು ಗಾಯಗಳಾಗಿವೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.