ಉಡುಪಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಘಟನೆ ಬಲಾಯಿಪಾದೆ ಜಂಕ್ಷನ್ ಬಳಿ ನಡೆದಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪ್ರಶಾಂತ್ ಹಾಗೂ ಪ್ರವೀಣ್ ಎಂದು ಪತ್ತೆಹಚ್ಚಲಾಗಿದೆ.
ಆರೋಪಿಗಳಿಬ್ಬರ ಬಳಿ ಇದ್ದ ವಿವಿಧ ಬ್ಯಾಂಡ್‌ನ ಮದ್ಯದ ಸಾಚೇಟ್, ಬೀಯರ್ ಬಾಟಲ್, ನೀರಿನ ಬಾಟಲ್‌ಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.