ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವು

ಬಳ್ಳಾರಿ : ಕುರಿ ಮೇಯಿಸಲು ಹೋದ ವೇಳೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ.

ಕುರಿ ಮೇಯಿಸಲು ಹೋದಾಗ ಜೋರು ಮಳೆ ಬಂದ ಕಾರಣ ಮರದ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಈ ಮರಕ್ಕೇ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭೀರಪ್ಪ (45), ಸುನೀಲ್ (26) ಮತ್ತು ವಿನೋದ್ (14) ಮೃತಪಟ್ಟವರು. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top