ಬಂಟ್ವಾಳ : ಲಾರಿಗಳ ನಡುವೆ ಭೀಕರ ಅಪಘಾತ ನಡೆದರಿಂದ ಲಾರಿಯಲ್ಲಿದ್ದ ಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ದುರಂತ ಘಟನೆ ಸಜೀಪದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಸಜೀಪನಡು ಗೋಳಿಪಡ್ಡು ನಿವಾಸಿ ರಫೀಕ್ ( 45) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಕ್ಲೀನರ್ ಯೂಸುಫ್ ಎಂಬಾತನ ಕೈಕಾಲುಗಳ ಮೇಲೆಯೂ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ, ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಅಲ್ಪಾಸ್ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ.
ಕಂಚಿನಡ್ಕಪದವು ಕಡೆಯಿಂದ ಸಜೀಪನಡು ತೆರಳುತ್ತಿದ್ದ ವೇಳೆ ಕಂಚಿನಡ್ಕಪದವಿನಲ್ಲಿ ಅಪಘಾತವಾಗಿದೆ. ಕೆಂಪು ಕಲ್ಲುಗಳನ್ನು ಸಾಗಿಸುವ ಲಾರಿಗೆ ಹಿಂಬದಿಯಿಂದ ಬರುತ್ತಿದ್ದ ಡಾಮರು ಟ್ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಎರಡು ಟಿಪ್ಪರ್ ಲಾರಿಗಳು ಆಳೆತ್ತರದಲ್ಲಿದ್ದ ಅಡಿಕೆ ತೋಟಕ್ಕೆ ಪಲ್ಟಿಯಾಗಿ ಬಿದ್ದಿದೆ. ಮತ್ತು ಟಿಪ್ಪರ್ ಲಾರಿಯಲ್ಲಿದ್ದ ಬಿಸಿ ಬಿಸಿ ಡಾಮರು ಮಿಶ್ರಿತ ಜಲ್ಲಿ ಕಲ್ಲುಗಳು, ಕೆಂಪು ಕಲ್ಲು, ಸಾಗಿಸುವ ಲಾರಿ ಚಾಲಕನ ಮೈ ಮೇಲೆ ಬಿದ್ದು ಬೆಂದು ಹೋಗಿದೆ. ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಿದರು ಚಿಕಿತ್ಸೆ ಫಲಿಸದೆ ಚಾಲಕ ರಫೀಕ್ ಮೃತಪಟ್ಟಿದ್ದಾನೆ. ಜೊತೆಗೆ ಇದ್ದ ಕ್ಲೀನರ್ ಯೂಸುಫ್ ನ ಮೇಲೆಯೂ ಡಾಮರು ಬಿದ್ದಿದ್ದು ಆತನಿಗೆ ಚಿಕಿತ್ಸೆನೀಡಲಾಗುತ್ತಿದೆ.
ಡಾಮರು ಲಾರಿಯಲ್ಲಿದ್ದ ರಿಜ್ವಾನ್ ಹಾಗೂ ಅಲ್ಪಾಸ್ ಎಮಬವರಿಗೆ ಅಪಘಾತದಲ್ಲಿ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಜೀಪನಡುವಿನಲ್ಲಿ ರಸ್ತೆಗೆ ಡಾಮರು ಹಾಕುವ ಉದ್ದೇಶದಿಂದ ಡಾಮರು ಸಾಗಿಸುವ ವೇಳೆ ಘಟನೆ ನಡೆದಿದೆ. ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯತನದ ಚಾಲನೆ ಕಾರಣ ಎನ್ನಬಹುದಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ. ಸುತೇಶ್ ಭೆಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.