ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ಈ ಮೂಲಕ ತಂಡ ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದೆ.
ತಂಡವನ್ನು ವರ್ಷಿತಾ.ಪಿ.ಆಳ್ವ, ರಶ್ಮಿ.ಎ, ಅನೂಶಾ.ಎ., ಸಿಂಚನ.ವಿ.ಎಸ್., ಅರ್ಪಿತಾ.ಎ., ಪೂರ್ವಿಕಾ.ಎ.ಎಸ್., ಶ್ರಾವ್ಯ.ಎ, ರಚನ.ಕೆ.ಡಿ, ಪ್ರಜ್ಞಾ. P., ಸ್ರುಜನಾ ಎಸ್. ಶ್ರಾವ್ಯ ಎಲ್.ಕೆ. ಮತ್ತು ತೇಜಸ್ವಿನಿ.ಯು. ಪ್ರತಿನಿಧಿಸಿದ್ದರು
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರು ವಿಜೇತ ತಂಡಕ್ಕೆ ತರಬೇತಿ ನೀಡಿದ್ದಾರೆ ಎಂದು ಪ್ರಿನ್ಸಿಪಾಲ್ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.