ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್-ಎ-ತೈಬಾ ಸಂಘಟನೆಯ ಟಾಪ್ ಉಗ್ರನನ್ನು ಪಾಕಿಸ್ತಾನದ ಸಿಂಥ್ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೈಫುಲ್ಲಾ ಖಾಲಿದ್ ಮೋಸ್ಟ್ ವಾಂಟೆಡ್ ಆಗಿದ್ದ ಲಷ್ಕರ್ ಉಗ್ರರನನ್ನು ಸಿಂಥ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮಟ್ಟಿ ತಾಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ.
2001 ರಲ್ಲಿ ರಾಂಪುರದಲ್ಲಿ ನಡೆದ ಸಿಆರ್‌ಪಿಎಫ್ ಶಿಬಿರದ ಮೇಲಿನ ದಾಳಿ, 2005 ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಗುಂಡಿನ ದಾಳಿ ಹಾಗೂ 2006 ರಲ್ಲಿ ನಾಗುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿ ಮೇಲೆ ನಡೆದಿದ್ದ ದಾಳಿಗಳಿಗೆ ಖಾಲಿದ್ ಪ್ರಮುಖ ಸಂಚುಕೋರನಾಗಿದ್ದ.
ಇತ್ತೀಚೆಗೆ ಖಾಲಿದ್ ನೇಪಾಳ ಬಿಟ್ಟು ಸಿಂಥ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮತ್ತಿಗೆ ಗ್ರಾಮದಲ್ಲಿ ನೆಲೆಸಿದ್ದ. ಅಲ್ಲಿ ನಿಷೇಧಿತ ಜಮಾತ್-ಉದ್-ದವಾ ಉಗ್ರ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.