ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಆಕ್ಷೇಪಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ವೇತಾ ಪೂಜಾರಿ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ ಗುಂಡುರಾವ್ ಇವರ ಭಾವ ಚಿತ್ರದ ಕೆಳಗಡೆ ಅವಹೇಳನಕಾರಿ ಪೋಸ್ಟ್, ಮಾಡಿರುವ ಆಧಾರದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣವನ್ನು ಮುಂದಿನ ತನಿಖೆಯ ಸಲುವಾಗಿ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
ಸುಹಾಸ್ ಶೆಟೆಇ ಹತ್ಯೆ ಪ್ರಕರಣದಲ್ಲಿ ಬಾಗಿಯಾಗಿರುವ ಬುರ್ಖಾಧಾರಿ ಮಹಿಳೆಯರನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂದು ಶ್ವೇತಾ ಪೂಜಾರಿ ಪ್ರಶ್ನಿಸಿದ್ದರು. ಈ ಪೋಸ್ಟ್‌ನಲ್ಲಿ ದಿನೇಶ್ ಗುಂಡೂರಾವ್ ಫೋಟೊ ಹಾಕಿ ಕೆಲವು ಆಕ್ಷೇಪಕಾರಿ ಪದಗಳನ್ನು ಬಳಸಿದ್ದರು.
ಶ್ವೇತಾ ಪೂಜಾರಿ ವಿರುದ್ಧ ಕೇಸ್ ದಾಖಲಿಸಿರುವದನ್ನು ಬಿಜೆಪಿ ಖಂಡಿಸಿದೆ. ಟೀಕಿಸಿದವರನ್ನೆಲ್ಲ ಕೇಸ್ ಹಾಕಿ ಬಂಧಿಸುವ ಕಾಂಗ್ರೆಸ್ ಸರಕಾರದ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ಬಿಜೆಪಿ ಹೇಳಿದೆ.