ಕೊಡಗು: ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಉಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಮಧು ಅಲಿಯಾಸ್ ಅಶೋಕ್ ಆತ್ಮಹತ್ಯೆ ಮಾಡಿಕೊಂಡವರು.
ಮದ್ಯ ಸೇವಿಸಿ ಬಳಿಕ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಮೂರು ವರ್ಷದ ಮಗಳಿಗೆ ಅನಾರೋಗ್ಯ ಕಾಡುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ವಾರದ ಹಿಂದೆ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದರು. ನಿನ್ನ ಮಧು ಅವರ ತಾಯಿ ಕೂಡ ಬೆಂಗಳೂರಿಗೆ ಆಗಮಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮದ್ಯ ಸೇವಿಸಿ ಬಂದೂಕಿನಿಂದ ತನಗೆ ತಾನೇ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
























