ಕೆಟ್ಟ ರಸ್ತೆಗಳಿಂದ ಬೆನ್ನು ನೋವು : 50 ಲ.ರೂ. ಪರಿಹಾರ ಕೋರಿ ಪಾಲಿಕೆಗೆ ನೋಟಿಸ್‌

ಮೂಲಸೌಕರ್ಯ ಒದಗಿಸಲು ವಿಫಲವಾಗಿರುವ ಬಿಬಿಎಂಪಿ ಅನಾರೋಗ್ಯಕ್ಕೆ ಹೊಣೆ ಎಂದ ತೆರಿಗೆದಾರ

ಬೆಂಗಳೂರು: ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ನಿರಂತರ ದೈಹಿಕ ಯಾತನೆ ಅನುಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ತೆರಿಗೆದಾರರೊಬ್ಬರು 50 ಲಕ್ಷ ರೂ. ಪರಿಹಾರ ಕೋರಿ ಬಿಬಿಎಂಪಿಗೆ ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ.

ರಿಚ್ಮಂಡ್ ಟೌನ್ ನಿವಾಸಿಯಾಗಿರುವ ದಿವ್ಯಕಿರಣ್ ಎಂಬವರು ಕಳುಹಿಸಿದ ನೋಟಿಸ್‌ನಲ್ಲಿ, ನಾನು ತೆರಿಗೆ ಪಾವತಿಸುವ ನಾಗರಿಕನಾಗಿದ್ದೇನೆ. ಆದರೆ ಬಿಬಿಎಂಪಿ ಮೂಲಸೌಕರ್ಯಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ. ಇದರಿಂದ ನಾನು ದೈಹಿಕ ಮತ್ತು ಮಾನಸಿಕ ಯಾತನೆಯನ್ನು ನಿರಂತರವಾಗಿ ಎದುರಿಸುತ್ತಿದ್ದೇನೆ. ಕೆಟ್ಟ ರಸ್ತೆಯಿಂದ ತೀವ್ರ ಕುತ್ತಿಗೆ ಮತ್ತು ಬೆನ್ನು ನೋವಿನ ಸಮಸ್ಯೆ ಅನುಭವಿಸುತ್ತಿದ್ದೇನೆ. ಮೂಳೆ ನೋವಿನ ಸಂಬಂಧ ಐದು ಬಾರಿ ವೈದ್ಯರನ್ನು ಭೇಟಿ ಮಾಡಿದ್ದೇನೆ ನಾಲ್ಕು ಬಾರಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.



















































 
 

ತೀವ್ರ ನೋವನ್ನು ನಿವಾರಿಸಲು ಚುಚ್ಚುಮದ್ದು ಹಾಕಿಸಿದ್ದೇನೆ. ಹಲವಾರು ಔಷಧಿಗಳು ಮತ್ತು ನೋವು ನಿವಾರಕಗಳನ್ನು ತೆಗೆದುಕೊಂಡಿದ್ದೇನೆ. ನೋವನ್ನು ತಡೆಯಲು ಸಾಧ್ಯವಾಗದೆ ಅತ್ತಿದ್ದೇನೆ. ಮಾನಸಿಕ ಯಾತನೆಯಿಂದ ನಿದ್ದೆಯೂ ಸರಿಯಾಗಿ ಬರುತ್ತಿಲ್ಲ. ಇದರಿಂದಾಗಿ ಆರೋಗ್ಯ ಮತ್ತು ದೈನಂದಿನ ಕೆಲಸದ ಮೇಲೆ ತೀವ್ರ ಪರಿಣಾಮ ಬೀರಿವೆ ಎಂದಿದ್ದಾರೆ.

ನಾವು ತೆರಿಗೆ ಪಾವತಿಸುತ್ತಿದ್ದೇವೆ. ನಮಗೆ ಉತ್ತಮ ರಸ್ತೆಗಳನ್ನು ಒದಗಿಸುವುದು ಬಿಬಿಎಂಪಿಯ ಕೆಲಸ. ಉತ್ತಮ ಮೂಲಸೌಕರ್ಯಗಳ ಬಗ್ಗೆ ಕಾಳಜಿ ವಹಿಸದಿರುವುದು ತುಂಬಾ ದುಃಖಕರ. ಈ ಕಾರಣಕ್ಕೆ ನೋಟಿಸ್‌ ಕಳುಹಿಸಿ 15 ದಿನಗಳ ಒಳಗಡೆ ಪರಿಹಾರ ಪಾವತಿಸಬೇಕೆಂದು ಕೋರಿದ್ದೇನೆ. ಒಂದು ವೇಳೆ ಪರಿಹಾರ ನೀಡದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top