ನಾರಾಯಣ್ ಪುರ್-ಬಿಜಾಪುರ್ ಗಡಿಯಲ್ಲಿ ಗುಂಡಿನ ಚಕಮಕಿಯಲ್ಲಿ  26 ನಕ್ಸಲೀಯರ ಹತ್ಯೆ

ಛತ್ತೀಸ್‌ಗಢದ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್‌ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ರಾಜ್ಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢದ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ.



















































 
 

ಗುಂಡಿನ ಚಕಮಕಿಯಲ್ಲಿ ಪೊಲೀಸರ ಬೆಂಬಲಿಗ ಮೃತಪಟ್ಟಿದ್ದಾರೆ ಮತ್ತು ಒಬ್ಬರು ಪೊಲೀಸರಿಗೆ ಗಾಯವಾಗಿದೆ ಎಂದು ಪೊಲೀಸರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ರಾಜ್ಯ ಪೊಲೀಸರು ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್‌ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾರಾಯಣ್ ಪುರ, ಬಿಜಾಪುರ್, ದಂತೇವಾಡ ಮತ್ತು ಕಾಂಕೇರ್ ಜಿಲ್ಲೆಗಳಿಂದ ಜಿಲ್ಲಾ ಮೀಸಲು ಪಡೆ (DRG) ಜಂಟಿ ತಂಡಗಳ ಮೇಲೆ ಶಸ್ತ್ರಸಜ್ಜಿತ ಮಾವೋವಾದಿಗಳು ಹೊಂಚುದಾಳಿ ನಡೆಸಿದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು.

ಮಾವೋವಾದಿಗಳ ‘ಮ್ಯಾಡ್’ ವಿಭಾಗದ ಹಿರಿಯ ಕಾರ್ಯಕರ್ತರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಸಿಕ್ಕಿ, ಭದ್ರತಾ ಪಡೆಗಳು ಪ್ರಸಿದ್ಧ ನಕ್ಸಲೀಯ ಭದ್ರಕೋಟೆಯಾದ ಅಭುಜ್‌ಮದ್ ಪ್ರದೇಶದೊಳಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.

ನಮ್ಮ ತಂಡಗಳು ನಕ್ಸಲರ ಅಡಗುತಾಣವನ್ನು ಸಮೀಪಿಸುತ್ತಿದ್ದಂತೆ ಮನಬಂದಂತೆ ಗುಂಡು ಹಾರಿಸಲು ಆರಂಭಿಸಿದರು. ಪ್ರತೀಕಾರದ ಕ್ರಮದಲ್ಲಿ, 26 ಕ್ಕೂ ಹೆಚ್ಚು ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂದು ನಸುಕಿನ ಜಾವ ಆರಂಭವಾದ ಎನ್‌ಕೌಂಟರ್ ಇನ್ನೂ ಮುಂದುವರೆದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top