ಕಡಬ : ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನಕ್ಕೆ, ಶಿಕ್ಷಣ ಕ್ರಾಂತಿಯ ಹರಿಕಾರರಾದ ದಿ. ಕುರುಂಜಿ ವೆಂಕಟರಮಣ ಗೌಡ ಅವರ ಸುಪುತ್ರರಾದ ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಆಗಮಿಸಿ, ಸಮುದಾಯ ಭವನ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.

ಕೆ.ವಿ.ಜಿ ಕುಟುಂಬದ ಹೆಸರು ನಮ್ಮ ಸಮುದಾಯ ಭವನದಲ್ಲಿ ಅಚ್ಚಳಿಯದೆ ಉಳಿಯುವಂತಹ, ನಮ್ಮ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಬೇಡಿಕೆಯನ್ನು ನೆರೆವೇರಿಸುವ ಸಂಪೂರ್ಣ ಭರವಸೆ ಈ ಸಂದರ್ಭದಲ್ಲಿ ನೀಡಿದರು.

ಈ ಸಂದರ್ಭದಲ್ಲಿ ಕೆ.ವಿ.ಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್, ರಜತ್ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಾತೃ ಸಮಿತಿಯ ಗೌರವಾಧ್ಯಕ್ಷ ಗೋಪಾಲಕೃಷ್ಣ ಗೌಡ, ಅಧ್ಯಕ್ಷ ಸುರೇಶ್ ಗೌಡ ಬೈಲು, ನಿವೃತ್ತ ಶಿಕ್ಷಕ ಜನಾರ್ದನ ಗೌಡ ಪಣೆಮಜಲು, ಕಡಬ ಸ್ಪಂದನ ಸಹಕಾರಿ ಸಂಘದ ಅ ಧ್ಯಕ್ಷ ಕೇಶವ ಗೌಡ ಅಮೈ ಕಲಾಯಿಗುತ್ತು, ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಡಾ.ಶಿವಕುಮಾರ್, ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳು, ಗ್ರಾಮ ಉಸ್ತುವಾರಿಗಳು, ತಾಲೂಕು ಯುವ ಘಟಕದ ಪದಾಧಿಕಾರಿಗಳು, ತಾಲೂಕು ಮಹಿಳಾ ಘಟಕದ ಪದಾಧಿಕಾರಿಗಳು, ಗ್ರಾಮ ಸಮಿತಿಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.