ಪುತ್ತೂರು : ಟೆಂಪೊ ಟ್ರಾವೆಲರ್ ವಾಹನ ಮತ್ತು ಕಾರಿನ ನಡುವೆ ಢಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಬೊಳುವಾರು ಸಮೀಪದಲ್ಲಿ ನಡೆದಿದೆ. ಈ ಘಟನೆ ತಡ ರಾತ್ರಿ ವೇಳೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿದ್ದ ಟೆಂಪೊ ಟ್ರಾವೆಲರ್ ಮತ್ತು ಪುತ್ತೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಲೇನೋ ಕಾರು ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪುತ್ತೂರಿನ ಬೈಪಾಸ್ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಅಪಘಾತ ನಡೆದಿದೆ. ಢಿಕ್ಕಿಯ ರಭಸಕ್ಕೆ ಟೆಂಪೊ ಟ್ರಾವೆಲರ್ 50 ಮೀಟರ್ ದೂರಕ್ಕೆ ಖಾಸಗಿ ರಸ್ತೆಯಲ್ಲಿ ಮುಂದಕ್ಕೆ ಸಾಗಿ ನಿಂತಿದೆ.