ಬೆಂಗಳೂರು: ಯುವತಿಯ ಮೃತದೇಹವನ್ನು ಸೂಟ್‌ಕೇಸ್ ನಲ್ಲಿಟ್ಟ ಘಟನೆ ಬೆಂಗಳೂರಿನ ರೈಲ್ವೆ ಸೇತುವೆಯ ಬಳಿ ನಡೆದಿದ್ದು, ಈ ಘಟನೆ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ.
ಬೆಂಗಳೂರಿನ ಹೊರವಲಯದಲ್ಲಿರುವ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಸ್ಥಳೀಯ ನಿವಾಸಿಗಳು ಸೂಟ್ ಕೇಸ್ ನ್ನು ಪತ್ತೆಹಚ್ಚಿದ್ದು, ಚಲಿಸುವ ರೈಲಿನಿಂದ ಸೂಟ್ ಕೇಸ್ ಹೊರಗೆ ಎಸೆದಿರಬಹುದು ಎಂದು ಅನುಮಾನವನ್ನು ವ್ಯಕ್ತಪಡಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ ಮಹಿಳೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ಸೂಟ್ ಕೇಸ್‌ನಲ್ಲಿ ಶವವನ್ನು ತುಂಬಿಸಿ ಚಲಿಸುವ ರೈಲಿನಿಂದ ಹೊರಗೆ ಎಸೆಯಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ ಮತ್ತು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.