ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ.
ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತಪಟ್ಟವರು.
ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ