ಪುತ್ತೂರು: ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ ಸ. ಪ್ರ.ದ. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಮೇ 26 ಸೋಮವಾರ ನಡೆಯಲಿದೆ.
ಪೂರ್ವಾಹ್ನ ಗಂಟೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಎ. ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.