ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ |   ಚಾಲಕನಿಗೆ ಗಾಯ

ಅನಂತಾಡಿ: ದಕ್ಷಿಣ ಕನ್ನಡದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅನೇಕ ಅವಘಡವಾಗುತ್ತಿದ್ದು, ಇದೀಗ ಅನಂತಾಡಿ ಗೋಳಿಕಟ್ಟೆಯಲ್ಲಿ ಜೋರಾದ ಗಾಳಿ, ಮಳೆಗೆ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಬಿದ್ದ ದುರ್ಘಟನೆ ನಡೆದಿದೆ.

ಈ ದುರ್ಘಟನೆಯಲ್ಲಿ. ಆಟೋ ಚಾಲಕರಾದ ಪ್ರಕಾಶ್ ಅವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಆಟೋರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ವಿಟ್ಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು. ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದಾರೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top