ಪುತ್ತೂರು: ಮಂಜಲ್ಪಡ್ಪು-ದರ್ಬೆ ನಡುವಿನ ಬೈಪಾಸ್ ರಸ್ತೆಯ ಪರ್ಲಡ್ಕದಲ್ಲಿ ಭಾನುವಾರ ಸುರಿದ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿ, ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯಾಯಿತು.
ಪರ್ಲಡ್ಕ ವೃತ್ತದ ಬಳಿಯ ಕಾವೇರಿ ಹಾರ್ಡ್’ವೇ ಅಂಗಡಿ ಪಕ್ಕದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಪರಿಣಾಮ ಎರಡು ಕಡೆಯ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಬಳಿಕ ಎರಡು ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯಿತು.