ಸಾರ್ವಜನಿಕರಿಗೆ ವಿಧಾನಸೌಧದ ಒಳಗಿನ ಸೊಬಗು ವೀಕ್ಷಿಸಲು ಅವಕಾಶ ನೀಡುವ ಪ್ರವಾಸ
ಬೆಂಗಳೂರು: ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ವಿಧಾನಸೌಧದ ಸಭಾಂಗಣದ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಜೂ.1ರಿಂದ ಪ್ರವಾಸೋದ್ಯಮ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ವಿಧಾನಸೌಧ ಗೈಡೆಡ್ ಟೂರ್‌ಗೆ ಚಾಲನೆ ನೀಡಲಿದೆ. ಪ್ರತಿ ಭಾನುವಾರ, 2 ಮತ್ತು 4ನೇ ಶನಿವಾರ ವಿಧಾನಸೌಧದ ಗೈಡೆಡ್ ಟೂರ್ ವ್ಯವಸ್ಥೆ ಏರ್ಪಡಿಸಲಾಗುತ್ತಿದ್ದು, ಬೆಳಗ್ಗೆ 8ರಿಂದ ಸಂಜೆ 5 ಗಂಟೆವರೆಗೆ ಇದಕ್ಕೆ ಸಮಯ ಹಾಗೂ ಶುಲ್ಕ ನಿಗದಿ ಮಾಡಲಾಗಿದೆ.
ಈ ನಿಮಿತ್ತ ನಡೆದ ಸಮಾರಂಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಗೈಡೆಡ್ ಟೂರ್ ಅನ್ನು ಬಹಳ ಚಿಂತನೆ ಮಾಡಿ ಆರಂಭಿಸಲಾಗುತ್ತಿದೆ. ಇಂದಿನಿಂದ ವಿಧಾನಸೌಧ ಕಟ್ಟಡ ಸಾರ್ವಜನಿಕರ ಪ್ರವಾಸಕ್ಕೆ ಮುಕ್ತವಾಗಿದೆ. ಜಗತ್ತಿನಲ್ಲೇ ಅತ್ಯಂತ ಸುಂದರ ಕಟ್ಟಡ ವಿಧಾನಸೌಧವಾಗಿದ್ದು, ಪ್ರಜಾಪ್ರಭುತ್ವದ ದೇಗುಲ. ಆಸಕ್ತರಿಗೆ, ವಿದ್ಯಾರ್ಥಿಗಳಿಗೆ, ಜನರಿಗೆ ಇದರ ದರ್ಶನ ಮಾಡಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಶುಲ್ಕ ಎಷ್ಟು?
ಜೂನ್ 1ರಿಂದ ವಿಧಾನಸೌಧ ಟೂರ್ ಗೈಡ್ ಪ್ರಾರಂಭವಾಗಲಿದೆ. ವಯಸ್ಕರಿಗೆ ರೂ. 50, 16 ವರ್ಷ ಮೇಲ್ಪಟ್ಟ ವಯಸ್ಕರಿಗೆ ರೂ. 50 ಶುಲ್ಕ ನಿಗದಿಪಡಿಸಲಾಗಿದೆ. 15 ವರ್ಷ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶ ಇರಲಿದೆ. ಪ್ರತಿ ಭಾನುವಾರ, 2 ಮತ್ತು 4ನೇ ಶನಿವಾರ ವಿಧಾನಸೌಧ ಟೂರ್ ವ್ಯವಸ್ಥೆ ಇರುತ್ತದೆ. ಬೆಳಗ್ಗೆ 8 ರಿಂದ ಸಂಜೆ 5 ಗಂಟೆಗೆ ಸಮಯ ನಿಗದಿ ಮಾಡಲಾಗಿದೆ.
ಇದಕ್ಕಾಗಿ ಆಸಕ್ತರು KSTDC ಆನ್‌ಲೈನ್ ಮೂಲಕ ಬುಕ್ ಮಾಡಬೇಕು. 30 ಜನರನ್ನು ಒಳಗೊಂಡ ಗ್ರೂಪನ್ನು ಪ್ರತಿ ಪ್ರವಾಸಕ್ಕೆ ನಿಗದಿ ಮಾಡಲಾಗುತ್ತದೆ. ಒಂದು ಗ್ರೂಪ್‌ಗೆ 90 ನಿಮಿಷಗಳ ಅವಧಿ ಇರಲಿದ್ದು, ಒಂದು ದಿನಕ್ಕೆ 300 ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರಲಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಗೈಡ್ ಮಾಹಿತಿ ನೀಡಲಿದ್ದಾರೆ. ವಿಧಾನಸೌಧದ ಗೇಟ್ ನಂಬರ್ 3ರಿಂದ ಪ್ರವೇಶ ಕಲ್ಪಿಸಲಾಗುವುದು.
qifltr