ವಿಟ್ಲ: ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವುನಲ್ಲಿ ನಡೆದಿದೆ.
ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಯ್ಸ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಡಿಕ್ಕಿಯಾದ ರಭಸಕ್ಕೆ ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇರ್ಫಾನ್ (19) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಹಸವಾರ ಫಾರಿಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ಚಾ ಕುಡಿಯಲು ಹೋಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

























