ಶಾಲಾರಂಭದ ಮೊದಲ ದಿನವೇ ರಜೆ
ಮಂಗಳೂರು: ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿನ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದು ರಜೆ ಸಾರಲಾಗಿದೆ. ಎಲ್ಲ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ) ಇಂದು ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರಿಂದ ಬೇಸಿಗೆ ರಜೆ ಮುಗಿದು ಇಂದಿನಿಂದ ಪುನರಾರಂಭಗೊಳ್ಳಬೇಕಿದ್ದ ಶಾಲೆಗಳು ನಾಳೆ ತೆರೆಯಲಿವೆ. ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ.