ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೊದಲು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಬಂಟ್ವಾಳದ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ ಪೊಲೀಸರು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ ಪೂಜಾರಿ(21), ಅಮ್ಮುಂಜೆ ಗ್ರಾಮದ ಶಿವಾಜಿ ನಗರ ಪೃಥ್ವಿರಾಜ್ ಜೋಗಿ(21) ಹಾಗೂ ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ(19) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಟಿಪ್ಪರ್‌ ಚಾಲಕ ಅಬ್ದುಲ್‌ ರಹಿಮಾನ್‌ ಅವರನ್ನು ಮೆ 27ರಂದು ಮಧ್ಯಾಹ್ನ ತಂಡವೊಂದು ತಲವಾರು ಮತ್ತಿತರ ಮಾರಕಾಯುಧಗಳಿಂದ ಕಡಿದು ಕೊಲೆ ಮಾಡಿದೆ. ಅಬ್ದುಲ್‌ ರಹಿಮಾನ್‌ ಜೊತೆಗಿದ್ದ ಕಲಂದರ್‌ಶಾಪಿ ಮೇಲೂ ಹಲ್ಲೆಯಾಗಿದ್ದು, ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top