ಕಾರ್ಕಳ ಮೆಸ್ಕಾಂ ಅಕೌಂಟ್ ಆಫೀಸರ್ ಮನೆ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದೆಲ್ಲೆಡೆ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ. ಹಲವು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ ಆಫೀಸರ್ ಗಿರೀಶ್ ರಾವ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಲೋಕಾಯುಕ್ತ ಡಿವೈಎಸ್ ಪಿ.ಮಂಜುನಾಥ ನೇತೃತ್ವದಲ್ಲಿ ದಾಳಿಯಾಗಿದ್ದು, ಕಾರ್ಕಳದ ಮನೆ, ಕಚೇರಿ, ಸಂಬಂಧಿಕರ ಮನೆ ಸೇರಿದಂತೆ ಐದು ಕಡೆ ದಾಳಿ ಮಾಡಿ ತಲಾಶ್ ನಡೆಸಿದ್ದಾರೆ. ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.



















































 
 

ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಂಗಾಧರ್ ಮನೆ, ಕಚೇರಿ, ಅಳಿಯ, ಭಾವನ ಮನೆ ಸೇರಿ 6 ಕಡೆ ಲೋಕಾಯುಕ್ತ ಎಸ್ ಪಿ ಹಣಮಂತರಾಯ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ದಾಖಗಳ ಶೋಧ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ, ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು. ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ ಲೋಕೋಪಯೋಗಿ ಸುಪರಿಡೆಂಟ್ ಇಂಜಿನಿಯರ್ ಅಮೀನ್ ಮುಕ್ತರ್ ಮನೆಯಲ್ಲಿ ವೇಳೆ ಕೋಟಿ ಕೋಟಿ ರೂ.ಮೌಲ್ಯದ ಆಸ್ತಿ ಪತ್ರ ಪತ್ತೆಯಾಗಿದೆ. ಕಲಬುರಗಿ ನಗರದ ಹೊರವಲಯದಲ್ಲಿ 25 ಎಕರೆ ಜಮೀನಿನ ಆಸ್ತಿ ಪತ್ರ, ಕಲಬುರಗಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಪೆಟ್ರೋಲ್ ಬಂಕ್, ಒಂದು ಕ್ರಶರ್ ಮಷಿನ್ ಲೈಸನ್ಸ್ ಸೇರಿದಂತೆ ಇತರೆ ಆಸ್ತಿ ಪತ್ರಗಳು ಪತ್ತೆಯಾಗಿವೆ.

ಧಾರವಾಡದ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಎಚ್. ಸುರೇಶ ಮನೆ ಹಾಗೂ ಸರಕಾರಿ ಕ್ವಾರ್ಟರ್ಸ್ ಮೇಲೆ ದಾಳಿಯಾಗಿದೆ. ಧಾರವಾಡದ ಡಿಸಿ ಕಾಂಪೌಂಡ್‌ನಲ್ಲಿರುವ ಕಚೇರಿ, ಕೆಸಿಡಿ ವೃತ್ತದ ಬಳಿಯ ಮನೆ ಮೇಲೆ ದಾಳಿ ಮಾಡಲಾಗಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದ ಗ್ರಾಮ ಪಂಚಾಯತಿ ಪಿಡಿಒ ಕಚೇರಿ ಮತ್ತು ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ. ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಸಿಬ್ಬಂದಿಗಳಿಂದ ಜಂಟಿ ಕಾರ್ಯಚರಣೆ ನಡೆಸಿದ್ದು, ರಾಮಕೃಷ್ಣಪ್ಪ ಗುಡಗೇರಿ ಗ್ರಾಮ ಪಂಚಾಯತಿ ಅಧಿಕಾರಿ ಕಚೇರಿ ಮತ್ತು ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

1 thought on “ಕಾರ್ಕಳ ಮೆಸ್ಕಾಂ ಅಕೌಂಟ್ ಆಫೀಸರ್ ಮನೆ ಮೇಲೆ ಲೋಕಾಯುಕ್ತ ದಾಳಿ”

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top