ಪುತ್ತೂರು: ವಿದ್ಯಾರ್ಥಿಗಳು ಕೊಠಡಿಯೊಳಗೆ ಉಳಿದರೆ ಯಶಸ್ಸು ಸಾಧಿಸಲಾಗುವುದಿಲ್ಲ. ಶಿಕ್ಷಣದಲ್ಲಿ ಅನುತ್ತೀರ್ಣರಾದವರು, ಜೀವನದಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮಗ್ರ ರೀತಿಯಲ್ಲಿ ಅಭಿವೃದ್ಧಿಯಾಗಬೇಕಾಗಿದೆ. ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಸಾಧನೆ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ರವಿ ಕುಮಾರ್ ಎನ್. ಹೇಳಿದರು.
ಅವರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ವಿವೇಕ ಅಭಿನಂದನಮ್ ನಲ್ಲಿ ಮಾತನಾಡಿದರು. ಕಾರ್ಯಕ್ರಮವನ್ನು ವಿವೇಕಾನಂದ ಪಿ. ಯು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ. ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳೀಧರ ಕೆ. ವಹಿಸಿದ್ದರು.
ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್. ಅವರನ್ನು ಸನ್ಮಾನಿಸಲಾಯಿತು. ಶೇ.100 ಫಲಿತಾಂಶಕ್ಕೆ ಕಾರಣವಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್, ಆಡಳಿಯ ಮಂಡಳಿ ಅಧ್ಯಕ್ಷ ಅಧ್ಯಕ್ಷ ಡಾ. ಎಂ. ಶಿವಪ್ರಕಾಶ್, ಸಂಚಾಲಕ ರವಿನಾರಾಯಣ ಎಂ., ನರೇಂದ್ರ ಪಿ.ಯು. ಕಾಲೇಜು ಪ್ರಾಂಶುಪಾಲ ಪ್ರಸಾದ್ ಶಾನ್ ಭಾಗ್, ಪಿ.ಟಿ.ಎ. ಅಧ್ಯಕ್ಷ ಪ್ರಶಾಂತ್ ಆಚಾರ್, ವಿವೇಕಾನಂದ ಪಿ.ಯು. ಕಾಲೇಜು ಉಪಪ್ರಾಂಶುಪಾಲ ದೇವಿಚರಣ್ ರೈ ಉಪಸ್ಥಿತರಿದ್ದರು. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ರೈ ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಂದ್ಯಾ ವಂದಿಸಿದರು. ಶಿಕ್ಷಕಿಯರಾದ ಪ್ರತಿಮ, ಪವಿತ್ರ ಕೈಕಾರ, ಕವಿತಾ ಸತೀಶ್ ಕಾರ್ಯಕ್ರಮ ನಿರೂಪಿಸಿದರು.
























