ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಕಲಬುರ್ಗಿಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗಲು ಸೂಚನೆ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ದ.ಕ.ಜಿಲ್ಲೆಯಿಂದ ಕಲುಬುರ್ಗಿ ಜಿಲ್ಲೆಯ ಶಹಬಾದ್‍ ಪೊಲೀಸ್‍ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸಿದ್ದು, ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55 ರಂತೆ ಈ ಆದೇಶ ಹೊರಡಿಸಲಾಗಿದ್ದು, ಈ ಕುರಿತು ಜೂ.6 ರಂದು ವಿಚಾರಣೆಗೆ ನ್ಯಾಯವಾದಿಗಳ ಮೂಲಕ ಹಾಜರಾಗಿ ವಾದಿಸುವಂತೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಸೂಚನೆ ನೀಡಿದ್ದಾರೆ.

ತಪ್ಪಿದಲ್ಲಿ ಈ ಪ್ರಕರಣದಲ್ಲಿ  ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top