ಮಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಸೊತ್ತುಗಳು ಸುಟ್ಟು ಕರಕಲಾಗಿವೆ. ಸ್ಟೇಟ್ಬ್ಯಾಂಕ್ನ ರಾವ್ ಆಂಡ್ ರಾವ್ ಸರ್ಕಲ್ ಬಳಿ ಇರುವ ಅಪಾರ್ಟ್ಮೆಂಟ್ನ ಎರಡನೇ ಮಹಡಿಯಲ್ಲಿರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ. ಪಾಂಡೇಶ್ವರ ಅಗ್ನಿಶಾಮಕ ಪಡೆಯವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಮನೆಯಲ್ಲಿದ್ದ ಸೋಫಾ, ಇಲೆಕ್ಟ್ರಾನಿಕ್ ಉಪಕರಣಗಳು ಮತ್ತಿತರ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಗೆ ಇದ್ದರು. ಹೀಟರ್ನಿಂದಾಗಿ ಶಾರ್ಟ್ ಸರ್ಕ್ಯೂಟ್ ಆಗಿದೆ ಎನ್ನಲಾಗಿದೆ. ಯಾವುದೆ ಸಾವುನೋವು ಉಂಟಾಗಿಲ್ಲ.