ಚಿಕ್ಕಮಗಳೂರು : ಮಂಜು ಕವಿದರಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಅವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.