ಘನ ವಾಹನಗಳಿಗೆ ತಡೆ : ಹಲವರ ವಿರುದ್ಧ ಪ್ರಕರಣ ದಾಖಲು

ವಿಟ್ಲ: ವಿಟ್ಲ: ಘನ ವಾಹನಗಳಿಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಹಲವರ ಮೇಲೆ ಪ್ರಕರಣ  ದಾಖಲಿಸಿದ್ದಾರೆ.

ಅಪಘಾತದ ಹಿನ್ನಲೆಯಲ್ಲಿ ರಿಯಾಝ್‌, ಸಮದ್‌,  ಕುಂಞಿಮೋನು, ರಹಿಮಾನ್‌, ಸುಲೈಮಾನ್‌ ಮತ್ತು ಇತರ 25 ರಿಂದ 30 ಜನರು ರಸ್ತೆಯಲ್ಲಿ ಘನ ವಾಹನಗಳು ಸಂಚರಿಸದಂತೆ ತಡೆಯೊಡ್ಡಿದ್ದರು. ಜೂ. 2ರಂದು ರಾತ್ರಿ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ಕೆಲವರು ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಹೋಗುವ ಲಾರಿಗಳನ್ನು ತಡೆದು ನಿಲ್ಲಿಸಿದ ಮಾಹಿತಿ ಬಂದ ಮೇರೆಗೆ, ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಈ ವೇಳೆ ಸದ್ರಿ ರಸ್ತೆಯಲ್ಲಿ ಸಂಭವಿಸಿರುವ ಅಫಘಾತ ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಆರೋಪಿಗಳು

ಘನ ವಾಹನಗಳು ಸಂಚರಿಸದಂತೆ ತಡೆಯೊಡ್ಡಿ, ಸದ್ರಿ ರಸ್ತೆಯಲ್ಲಿ ಯಾವುದೇ ಘನ ಲಾರಿಗಳನ್ನು ಸಂಚರಿಸಲು ಬಿಡುವುದಿಲ್ಲ ಎಂದು ವಾಹನಗಳನ್ನು ತಡೆಗಟ್ಟಿದ್ದಾರೆ ಎನ್ನಲಾಗಿದೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top