ಕೊಕ್ಕಡ: ಆಟೋ ರಿಕ್ಷಾ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಕೊಕ್ಕಡದಲ್ಲಿ ನಡೆದಿದೆ.
ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ರಘುರಾಮ ಮಡಿವಾಳ ಅವರ ಪುತ್ರ ಶರತ್ ಕುಮಾರ್ ಕೆ. (36) ಮೃತಪಟ್ಟವರು.
ಶರತ್ ಕುಮಾರ್ ಇಂದು ಬೆಳಿಗ್ಗೆ ಸ್ವಂತ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮನೆಗೆ ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳೀಯರು ಕೂಡಲೇ ಶರತ್ ರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದಾಗಲೇ ಅವರು ನಿಧನ ಹೊಂದಿದ್ದರು. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
d6jpds