ಮಳೆಯ ಜತೆಗೆ ಬಿಸಿಲಿನ ವಾತಾವರಣ | ದಕ್ಷಿಣ ಕನ್ನಡದ ಗ್ರಾಮೀಣ ಭಾಗದಲ್ಲಿ ಶಂಕಿತ ಡೆಂಗ್ಯೂ ಪ್ರಕರಣದಲ್ಲಿ ಏರಿಕೆ

ಮಂಗಳೂರು: ಮಳೆಯ ಅಬ್ಬರ ನಿಲ್ಲುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣ ಏರಿಕೆಯಾಗಿದೆ.

ಕೆಲ ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವರಣ ಕಂಡು ಬರುತ್ತಿರುವುದೇ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣ ಏರಿಕೆಗೆ ಕಾರಣವಾಗಿದೆ.

ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೂ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮ ಗಳನ್ನು ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹೇಳಿದ್ದಾರೆ.ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕಳೆದ ಐದು ತಿಂಗಳ ಅವಧಿಯಲ್ಲಿ ದ.ಕ. ಜಿಲ್ಲೆಯಲ್ಲಿ 43 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದರೆ, ಮೇ ತಿಂಗಳೊಂದರಲ್ಲೇ 10 ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ (2024) ರಲ್ಲಿ ಒಟ್ಟು 534 ಡೆಂಗ್ಯೂ ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿದ್ದವು ಎಂದು ತಿಳಿಸಿದ್ದಾರೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top