ಐಪಿಎಲ್‍  ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರೀ ಜನಸ್ತೋಮ | ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಹಲವರು ಕಾಲ್ತುಳಿತಕ್ಕೆ ಬಲಿ

ಬೆಂಗಳೂರು: 18ನೇ ಐಪಿಎಲ್‍ ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ ಆಗಿದ್ದು, ಈ ಸಂಬಂಧ ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಯುತ್ತಿದ್ದಂತೆ ಭಾರೀ ಜನಸ್ತೋಮ ನೆರೆದಿದ್ದು, ಈ ಸಂದರ್ಭ ಕಾಲ್ತುಳಿತಕ್ಕೆ ಹಲವರು ಬಲಿಯಾಗಿದ್ದಾರೆ.

ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ನೂಕುನುಗ್ಗಾಟದಲ್ಲಿ  ಕಾಲ್ತುಳಿತಕ್ಕೆ  15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಮಹಿಳೆ ಸೇರಿ ಐವರು ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಬೌರಿಂಗ್ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್ ಬಿದ್ದು ಮೂವರ ಕಾಲು ಮುರಿದಿದೆ ಎನ್ನಲಾಗಿದೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top