ಭೋಪಾಲ: ಸಿಮೆಂಟ್ ತುಂಬಿದ್ದ ಟ್ರಕ್ ವ್ಯಾನ್ ಮೇಲೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಝಬುವಾ ಎಂಬಲ್ಲಿ ಇಂದು ನಸುಕಿನ ಹೊತ್ತು ಸಂಭವಿಸಿದೆ. ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಝಬುವಾ ಜಿಲ್ಲೆಯ ಮೇಘನಗರ ತಹಸಿಲ್ನ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ಬೆಳಗಿನ ಜಾವ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ತಾತ್ಕಾಲಿಕ ರಸ್ತೆ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ಸಮತೋಲನ ಕಳೆದುಕೊಂಡು ಪಲ್ಟಿಯಾಗಿ ಔಯಾನ್ ಮೇಲೆ ಬಿದ್ದಿದೆ. ವ್ಯಾನಿನಲ್ಲಿದ್ದವರು ಮದುವೆ ಸಮಾರಂಭದಿಂದ ಮನೆಗೆ ಹಿಂತಿರುಗುತ್ತಿದ್ದರು. ವ್ಯಾನ್ನಲ್ಲಿದ್ದ ಎಲ್ಲ ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ರಕ್ನ ಭಾರಕ್ಕೆ ವ್ಯಾನ್ ಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.