ಧರ್ಮಸ್ಥಳ: ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಆಟೋರಿಕ್ಷಾವೊಂದು ಸಂಪೂರ್ಣ ಜಖಂಗೊಂಡಿರುವ ಘಟನೆ ಧರ್ಮಸ್ಥಳದ ಬೊಳಿಯಾರ್ ನಲ್ಲಿ ನಡೆದಿದೆ.
ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಸಂದರ್ಭ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆ ಮಧ್ಯೆ ಎದುರಾಗಿದ್ದು ಇದನ್ನು ಗಮನಿಸಿ ಆತಂಕಗೊಂಡ ದಿನೇಶ್ ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ದೂರದಲ್ಲಿ ಅಡಗಿ ನಿಂತರು.
ಈ ವೇಳೆ ಗುಂಪಿನಲ್ಲಿದ್ದ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದ್ದು ಇದನ್ನು ಕಂಡ ದಿನೇಶ್ ಗಾಬರಿಗೊಂಡು ಸ್ಥಳದಲ್ಲಿಯೇ ಮೂರ್ಛೆ ಹೋಗಿದ್ದರು ಎನ್ನಲಾಗಿದೆ. ರಿಕ್ಷಾವನ್ನು ಪುಡಿ ಮಾಡುತ್ತಿರುವ ಶಬ್ದ ದಿನೇಶ್ ರವರ ಪತ್ನಿ ಹಾಗೂ ನೆರೆಯವರಿಗೆ ಕೇಳಿ ಸ್ಥಳಕ್ಕೆ ಬಂದು ದಿನೇಶ್ ಅವರನ್ನು ಉಪಚರಿಸಿದ ಬಗ್ಗೆ ವರದಿಯಾಗಿದೆ. ಕಲ್ಲೇರಿ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡಿಕೊಂಡು ಬದುಕನ್ನು ಸಾಗಿಸುತ್ತಿದ್ದರು.
























