ಕಾಲ್ತುಳಿತ ಘಟನೆ : ಕೆಎಸ್‌ಸಿಎ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕೆಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ ಜೈರಾಮ್‌ ಶುಕ್ರವಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್‌ ಅವರೇ ಪ್ರಕಟಣೆ ಹೊರಡಿಸಿದ್ದಾರೆ.

ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ತನಿಖೆಯನ್ನು ಸಿಐಡಿಗೆ ವಹಿಸಿ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆ ಹಾಗೂ ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸಿಎಂ ಸೂಚನೆ ಬೆನ್ನಲ್ಲೇ ಶುಕ್ರವಾರ ಕೆಎಸ್‌ಸಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಆರ್‌ಸಿಬಿ ಮ್ಯಾನೇಜ್‌ಮೆಂಟ್‌, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್ ‌ಹಾಗೂ ಕೆಎಸ್‌ಸಿಎನಿಂದ ಒಟ್ಟು 6 ಮಂದಿಯನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಕೆಎಸ್‌ಸಿಎನಲ್ಲಿ ಇಬ್ಬರು ಪದಾಧಿಕಾರಿಗಳು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top