ಧರ್ಮಸ್ಥಳ: ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹಿಂಬಾಲಿಸಿಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಕಲ್ಮಂಜ ನೀರಚಿಲುಮೆ ರಸ್ತೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ಕೋಟ್ಟು ರಸ್ತೆಯಲ್ಲಿ ಮಹಿಳೆಯೊಬ್ಬರು ಜೂ.6ರಂದು ಸಂಜೆ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಯುವಕನೊಬ್ಬ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಈ ಬಗ್ಗೆ ನೊಂದ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು BNS74,78(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ತನಿಖೆ ನಡೆಸಿ ಇಂದು ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಮುಂಡೇಲು ನಿವಾಸಿ ಎಮ್.ಡಿ.ನಿಯಾಜ್ (20) ಎಂಬಾತನನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.