ಆಗಸ್ಟ್‌ 15ರಿಂದ ದೇವಸ್ಥಾನಗಳು ಪ್ಲಾಸ್ಟಿಕ್‌ಮುಕ್ತ

ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್‌ ನಿಷೇಧಿಸಲು ಸೂಚನೆ

ಬೆಂಗಳೂರು : ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ ಮಾಡಿದ್ದಾರೆ. ಆಗಸ್ಟ್ 15ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ ಅಭಿಯಾನ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಹೇಳಿದ್ದಾರೆ.

ಈ ಆದೇಶ ಜಾರಿಗೆ 2 ತಿಂಗಳು ಸಮಯಾವಕಾಶ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳನ್ನು ತೆಗೆದಿಟ್ಟುಕೊಂಡಿದ್ದರೆ ಅವುಗಳನ್ನು ಬಳಕೆ ಮಾಡಬಹುದು. ಆಗಸ್ಟ್ 15ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.



















































 
 

ತಿರುಪತಿ, ಕುಕ್ಕೆ ಸುಬ್ರಹ್ಮಣ್ಯ ಸೇರಿ ಸರ್ಕಾರದ 3 ಸಾವಿರ ರೂಮ್‌ಗಳನ್ನು ಆನ್‌ಲೈನ್​ ಬುಕ್ಕಿಂಗ್ ವ್ಯವಸ್ಥೆಯಡಿ ತರಲು ರಾಮಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಪ್ರವಾಸಿಗರು, ಮುಜುರಾಯಿ ಇಲಾಖೆ ವಿವಿಧ ದೇಗುಲಗಳಿಗೆ ಭೇಟಿ ನೀಡುವ ಮೊದಲು ಭವನದಲ್ಲಿ ಉಳಿದುಕೊಳ್ಳಲು ರೂಮ್‌ಗಳನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಿಕೊಂಡು ಹೋಗಬಹುದು. ಬೇರೆ ರಾಜ್ಯದಲ್ಲಿ ಇರುವ ಭವನಗಳ ರೂಮ್‌ ಬುಕ್ಕಿಂಗನ್ನು ಆನ್‌ಲೈನ್‌ ಮೂಲಕ ಜಾರಿ ಮಾಡುವ ವ್ಯವಸ್ಥೆ ರೂಪಿಸಲು ಸೂಚನೆ ನೀಡಿದ್ದಾರೆ. ಇದು ಜಾರಿಗೆ ಬಂದರೆ ಬೇರೆ ರಾಜ್ಯಗಳಲ್ಲಿರುವ ಕರ್ನಾಟಕದ ಭವನಗಳನ್ನು ಆನ್‌ಲೈನ್​ ಮೂಲಕವೇ ಬುಕ್ಕಿಂಗ್ ಮಾಡಿಕೊಂಡು ಹೋಗಬಹುದು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top