ಅಕ್ರಮ ಕೋಳಿ ಅಂಕ ಅಡ್ಡೆಗೆ ದಾಳಿ : ಮೂವರ ಬಂಧನ, ಸೊತ್ತುಗಳು ವಶಕ್ಕೆ

ಕಡಬ: ಅಕ್ರಮ ಕೋಳೀ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿ ನಡೆದಿದೆ.

ಕಡಬ ನಿವಾಸಿಗಳಾದ ರಾಧಾಕೃಷ್ಣ (52) ಮೋಹನ್ ದಾಸ್ (48) ವೆಂಕಟರಮಣ (30) ಬಂಧಿತರು.

ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ, ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಭಿನಂದನ್ ಮತ್ತು ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿದ್ದಾರೆ. ಈ ಸಂದರ್ಭ ಅಂಕದಲ್ಲಿ ನಿರತರಾಗಿದ್ದ 8 ಜನರು ಪರಾರಿಯಾಗಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾದ ಕತ್ತಿ,  3,560 ರೂ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top