ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ.
ಜೂಊ.9 ರಂದು ರಾತ್ರಿ ಮಾಜಿ ಶಾಸಕರಾದ ಮೊಯಿದ್ದೀನ್ ಬಾವಾ ರವರು ಮತ್ತು ಅವರ ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತು ಎನ್.ಎಂ.ಪಿ.ಎ ಕಛೇರಿಯ ಡೆಪ್ಯೂಟಿ ಚೇರ್ಪಸ್ರನ್ ರವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು ಅವಕಾಶ ನೀಡದೇ, ಅವರನ್ನು ತಡೆದು ನಿಲ್ಲಿಸಿದ ಘಟನೆ ನಡೆದಿತ್ತು. ನಂತರ ಅವರು ಹೊರಗೆ ಬಂದಾಗಲೂ ಹಿಂಬಾಲಿಸುತ್ತಾ ಬೆದರಿಕೆ ಹಾಕಿ ಕಿರಿಚುತ್ತಾ ಬಂದಿದ್ದು, ಕಾರಿನಲ್ಲಿ ಬೇರೆ ಕರ್ತವ್ಯಕ್ಕೆ ಹೋಗುತ್ತಿರುವಾಗ ಕಾರನ್ನು ಸಹ ತಡೆದು ನಿಲ್ಲಿಸಿ, ವಾದ-ವಿವಾದ ಮಾಡಿರುವ ಬಗ್ಗೆ ಮಂಗಳೂರಿನ ಪಣಂಬೂರು ಎನ್ ಎಂಪಿಎ ಕಾರ್ಯದರ್ಶಿಯವರು ಮಂಗಳವಾರ ಸಂಜೆ ದೂರು ನೀಡಿದ್ದರು.
ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224,221,132, 126, 127, 226 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.