ಗುಜರಾತಿನ ಅಹಮದಾಬಾದ್‍ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆದ ತಕ್ಷಣದಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನವೊಂದು ಗುಜರಾತಿನ ಅಹಮದಾಬಾದ್‌ನಲ್ಲಿ ಪತನವಾದ ದುರಂತ ಇಂದು ಸಂಭವಿಸಿದೆ.

ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. ಆದರೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಇಂದು ಮಧ್ಯಾಹ್ನ ಗುಜರಾತ್‌ ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏ‌ರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ ಹೋಗುತ್ತಿತ್ತು. ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top