ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.