ಪುತ್ತೂರು: ಗುಜರಾತ್ ನ ಅಹಮದಾಬಾದ್ ನಲ್ಲಿ ನಿನ್ನೆ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಮೌನ ಪ್ರಾರ್ಥನೆ ಮೂಲಕ ಸಂತಾಪ ಸೂಚಿಸಲಾಯಿತು.
ವಿಮಾನ ದುರಂತದಲ್ಲಿ ಸುಮಾರು 242ಕ್ಕಿಂತಲೂ ಹೆಚ್ಚು ಪ್ರಯಾಣಿಕರು ಮೃತ ಪಟ್ಟಿದ್ದು, ಅವರಿಗೆ ಇಂದು ಸಂತಾಪ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್, ಮುಖ್ಯ ಶಿಕ್ಷಕ ಪ್ರಸನ್ನ ಕೆ, ಶಿಕ್ಷಕರು -ಶಿಕ್ಷಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
























