ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಎನ್ಐಎ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್ಐಎ ತಂಡ ನಡೆಸುತ್ತಿದೆ.
ಅದರಂತೆ ಇಂದು ಬೆಂಗಳೂರಿನಿಂದ ಆಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿವೆ.