ಶಿವಮೊಗ್ಗ ಭಾರೀ ಮಳೆಯಿಂದ ಭೂಕುಸಿತ | ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ | ವಾಹನ ಸಂಚಾರದಲ್ಲಿ ಬದಲಿ ವ್ಯವಸ್ಥೆ

ಶಿವಮೊಗ್ಗ : ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಮುಂಗಾರು ಮಳೆ ಹಿನ್ನೆಲೆ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ನಾಳೆಯಿಂದ ಬರೋಬ್ಬರಿ ಮೂರುವರೆ ತಿಂಗಳುಗಳ ಕಾಲ ಆಗುಂಬೆ ಘಾಟಿನಲ್ಲಿ ಭಾರೀ ವಾಹನ ಓಡಾಡುವುದಿಲ್ಲ. ಆಗುಂಬೆ ಘಾಟಿ 169ಎ ಹೆದ್ದಾರಿ ರಸ್ತೆಯಲ್ಲಿ ಸಂಚಾರ ಬಂದ್ ಮಾಡಿದ್ದು, ಭಾರೀ ವಾಹನಗಳ ಓಡಾಟಕ್ಕೆ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ಮಲ್ಪೆ – ಆಗುಂಬೆ ಹೆದ್ದಾರಿ ರಸ್ತೆಯಾಗಿರುವ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶಿಸಿದ್ದಾರೆ.

ಬದಲಿ ಮಾರ್ಗ :



















































 
 

ಉಡುಪಿಯಿಂದ ತೀರ್ಥ ಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗ ವಾಗಿ ಉಡುಪಿ-ಕುಂದಾಪುರ-ಸಿದಾಪುರ-ಮಾಸ್ತಿಕಟ ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದ್ದು ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶ

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ: 15-06-2025 ರಿಂದ 30-09-2025 ರವರೆಗೆ ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಉಲ್ಲೇಖ (1)ರ ಪತ್ರದಲ್ಲಿ ಕೋರಲಾಗಿದೆ. ಈ ವಿಚಾರದಲ್ಲಿ ಉಲ್ಲೇಖ(2)ರಂತೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯಲಾಗಿರುತ್ತದೆ.

ಸದರಿಯವರ ಕೋರಿಕೆ ಹಾಗೂ ಪೊಲೀಸ್ ಇಲಾಖಾ ವರದಿಯನ್ವಯ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ಕಲಂ 221(ಎ) (2) & (5) , 1692 : 15-06-2025 20 30-09-2025 d ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಿದೆ ಹಾಗೂ ಭಾರಿ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವುದು ಎಂದು ಆದೇಶಿಸಲಾಗಿದೆ

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top