ಬೆಳ್ತಂಗಡಿ : ಉಜಿರೆಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಶನಿವಾರ ದಾಳಿ ನಡೆಸಿ ಪರಿಶೀಲಿಸಿದ್ದಾರೆ.
ಈ ಸಂದರ್ಭ ಉಜಿರೆಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದ್ದು. ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಲಾಡ್ಜ್ ನ ಮ್ಯಾನೇಜರ್ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ (49) ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಯೋಗಿಶ್ ಆಚಾರ್ಯ (49) ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಬಂಧಿತರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.