ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆ | ಸವಣೂರು ಗ್ರಾಮದ ಕೆಡೆಂಜೋಡಿತ್ತಾಯಿ ದೈವದ ನುಡಿ ನಿಜವಾಯಿತು

ಗಂಗಾವತಿ: ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು. ದೈವ ನುಡಿದ ನುಡಿ ನಿಜವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಸತ್ಯದ ದೈವಸ್ಥಾನ ಆರೇಲ್ತಾಡಿ ಉಲ್ಲಾಕ್ಕು, ಕೆಡೆಂಜೋಡಿತ್ತಾಯಿ ದೈವಸ್ಥಾನದಲ್ಲಿ ಮೇ 13 ರಂದು ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ದೈವದ ಬಳಿ ಜನಾರ್ದನ ರೆಡ್ಡಿ ಆಪ್ತರು ಬಿಡುಗಡೆಯ ಬಗ್ಗೆ ಕೇಳಿದಾ ಇಂದಿನಿಂದ 1 ತಿಂಗಳ ಒಳಗಡೆ ಜೈಲಿನಿಂದ ಬಿಡುಗಡೆ ಆಗುತ್ತಾರೆ ಎಂದು ದೈವ ಪಾತ್ರಿ ನುಡಿದಿದ್ದರು.

ದೈವ ನುಡಿದಂತೆ 27 ದಿನಕ್ಕೆ ಅಂದರೆ ಜೂ.11 ರಂದು ಜನಾರ್ದನ ರೆಡ್ಡಿಯವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದು ಕಾರ್ಣಿಕ ದೈವ ಕೆಡೆಂಜೊಡಿತ್ತಾಯಿ ದೈವದ ಅನುಗ್ರಹವಾಗಿದೆ ಎಂದು ಗಾಲಿ ಜನಾರ್ದನ ರೆಡ್ಡಿ ಆಪ್ತರು ತಿಳಿಸಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿತ್ತು. ಇದರಿಂದ ಚಂಚಲಗೂಡ ಜೈಲಿನಲ್ಲಿದ್ದ ರೆಡ್ಡಿ ಬಿಡುಗಡೆಯಾಗಿದ್ದರು.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top