ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು | ಯುವ ವೈದ್ಯ ಡಾ.ಮೊಹಮ್ಮದ್ ಅಮಲ್‍ ಮೃತ್ಯು

ಮಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಲ್ಲಿ ವೇಗವಾಗಿ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ನಂತೂರು ಬಳಿ ನಡೆದಿದೆ.

ಕೇರಳದ ಆಲಪ್ಪುಝ ಮೂಲದ ಡಾ. ಮೊಹಮ್ಮದ್ ಅಮಲ್ (29) ಮೃತಪಟ್ಟವರು.

ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೊಹಮ್ಮದ್ ಅಮಲ್‍ ಭಾನುವಾರ ರಾತ್ರಿ 11:45 ರ ವೇಳೆ ತಮ್ಮ ಸಿಯಾಝ್ ಕಾರಿನಲ್ಲಿ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿಯೊಂದಿಗೆ ನಂತೂರಿನಿಂದ ಪಂಪೈಲ್ ಕಡೆಗೆ ತೆರಳುತ್ತಿದ್ದರು. ಹೆದ್ದಾರಿ ಪ್ರಾಧಿಕಾರದ ಕಚೇರಿ ಬಳಿ ಕಾರು ಅತಿವೇಗದಿಂದ ಡಿವೈಡರ್ನ ಗ್ರಿಲ್‌ಗೆ ಡಿಕ್ಕಿ. 2-3 ಬಾರಿ ಪಲ್ಟಿಯಾಗಿ ರಸ್ತೆಯ ಮೇಲೆ ಬಿದ್ದಿದೆ. ಚಾಲನೆ ಮಾಡುತ್ತಿದ್ದ ಮೊಹಮ್ಮದ್ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿದ್ದ ವಿದ್ಯಾರ್ಥಿನಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.



















































 
 

ಇದೇ ವೇಳೆ, ಅಪಘಾತಕ್ಕೀಡಾದ ಕಾರನ್ನು ತಪ್ಪಿಸಲು ಯತ್ನಿಸಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಇದರಿಂದಾಗಿ ನಂತೂರು-ಪಂಪೈಲ್ ಹೆದ್ದಾರಿಯಲ್ಲಿ ರಾತ್ರಿಯಿಡೀ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು, ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ಸಂಬಂಧ ಮಂಗಳೂರು ಪೂರ್ವ ಸಂಚಾರಿ (ಕದ್ರಿ) ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top