ಕಡಬ: ಮಹಿಳೆಯೊಬ್ಬರು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ.
ದೋಳಾಡಿ ನಿವಾಸಿ ಪುರಂದರ ಎಂಬವರ ಪತ್ನಿ ರೇಖಾ(35) ಮೃತಪಟ್ಟವರು.
ನೀರಿನ ಪಂಪ್ ಸ್ವಿಚ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.