ಅಕ್ರಮ ಜೂಜಾಟ ಅಡ್ಡೆಗೆ ದಾಳಿ : 9 ಮಂದಿಯ ಬಂಧನ

ಬೆಳ್ತಂಗಡಿ: ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆಗೆ  ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಆಟದಲ್ಲಿ ನಿರತರಾಗಿದ್ದ 9 ಮಂದಿಯನ್ನು ಬಂಧಿಸಿದ ಘಟನೆ ಓಡಿಲ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಸ್ಥಳದಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ಎಲೆಗಳು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ ಹಾಗೂ 26,778 ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 78,80 KP Act -1963 ಮತ್ತು ಕಲಂ 112(1) BNS 23 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸುಬ್ಬಾಪುರ್ ಮಠ, ಸಬ್ ಇನ್ಸೆಕ್ಟರ್ ಮುರುಳೀಧರ್ ನಾಯ್ಕ್,, ಸಬ್ ಇನ್ಸೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top