ದ್ವೇಷ ಭಾಷಣ : ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿದ ಸ್ಪೀಕರ್‌ ಖಾದರ್‌

ಹಿಂದಿನ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗೃಹ ಸಚಿವ ಪರಮೇಶ್ವರ್‌ಗೆ ಪತ್ರ

ಮಂಗಳೂರು: ದ್ವೇಷ ಭಾಷಣಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ದಕ್ಷಿಣ ಕನ್ನಡದ ಹಿಂದಿನ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಗೃಹ ಸಚಿವರಿಗೆ ಸ್ಪೀಕರ್‌ ಯು.ಟಿ.ಖಾದರ್‌ ಪತ್ರ ಬರೆದಿದ್ದಾರೆ.

ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷಭರಿತ ಭಾಷಣಗಳು, ಪ್ರಚೋದನಾತ್ಮಕ ಹೇಳಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸಮಾಜ ಘಾತುಕ ವದಂತಿಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಾರಿ ಧಕ್ಕೆ ಉಂಟುಮಾಡುವಂತಹ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡುತ್ತಿವೆ. ಈ ಗಂಭೀರ ಬೆಳವಣಿಗೆಯನ್ನು ನಾನು ಈ ಪತ್ರದ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಬರೆದ ಒತ್ರದಲ್ಲಿ ಹೇಳಿದ್ದಾರೆ.



















































 
 

ಈ ಹಿಂದಿನ ಕೆಲವು ಪೊಲೀಸ್ ಅಧಿಕಾರಿಗಳು ಈ ದ್ವೇಷ ಭಾಷಣ, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಸಮಾಜ ಘಾತುಕ ವದಂತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೆ ಅಸಹಾಯಕತೆ ಅಥವಾ ನಿರ್ಲಕ್ಷ್ಯ ವಹಿಸಿದ್ದಾರೆ. ಆದರೆ ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಸಮರ್ಪಕ ಹಾಗೂ ತ್ವರಿತ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇ

ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ ಕರಾವಳಿ ಭಾಗದಲ್ಲಿ ಧರ್ಮಾಧಾರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೃತ್ಯಗಳಲ್ಲಿ ನಿಷ್ಠೆಯಿಂದ, ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣಗಳ ವಿರುದ್ಧ ಯಾಕೆ ಸೂಕ್ತ ಕ್ರಮ ಕೈಗೊಳ್ಳಲಿಲ್ಲ? ಅದಕ್ಕೆ ಕಾರಣಗಳೇನು ಅನ್ನುವ ಸೂಕ್ತ ತನಿಖೆಯಾಗಬೇಕಿದೆ ಎಂದು ಮನವಿ ಮಾಡಿದ್ದಾರೆ.

ಆ ಮೂಲಕ ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು. ಈ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ನನ್ನ ಅಭಿಪ್ರಾಯವನ್ನು ಈ ಮೂಲಕ ತಿಳಿಸುತ್ತಿದ್ದೇನೆ. ಅಲ್ಲದೇ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣ ತಡೆಯಲು ವಿಫಲರಾಗಿದ್ದರು. ಅದರ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top