ಬಿ.ಸಿ.ರೋಡ್: ಗಂಡ- ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ತಿಮ್ಮಪ್ಪ ಮೂಲ್ಯ (50) ಹಾಗೂ ಆತನ ಪತ್ನಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನ;ಲಾಗಿದೆ.
ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಕಂಡು ಬಂದರೆ, ತಿಮ್ಮಪ್ಪ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಯಂತಿ ಅವರು ಗರ್ಭಿಣಿ ಯಾಗಿದ್ದು, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು. ಆದರೆ ಈ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಕುಟುಂಬದವರನ್ನು ದುಖಃತಪ್ತಗೊಳಿಸಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
























