ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್‌ ನೋಟಿಸ್‌

ಸದನದಲ್ಲಿ ಆರ್‌ಎಸ್‌ಎಸ್‌, ಬಜರಂಗ ದಳ ಟೀಕಿಸಿದ್ದ ಪ್ರಕರಣ

ಬೆಂಗಳೂರು: ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್​ ಮತ್ತು ಬಜರಂಗದಳದಿಂದ ಎಂದು ಸದನದಲ್ಲಿ ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್‌ ನೋಟಿಸ್‌ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿ ಜೂನ್ 26ರೊಳಗೆ ನೋಟಿಸ್‌ಗೆ ಉತ್ತರಿಸಬೇಕು ಎಂದು ಹೇಳಿದೆ.





















































 
 

ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್‌ ಮತ್ತು ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸದನದಲ್ಲಿ ಅಲ್ಲೋಲಕಲ್ಲೋಲ ಉಂಟಾಗಿತ್ತು. ಬಿಜೆಪಿ ಶಾಸಕರು ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ವಾಗ್ದಾಳಿ ನಡೆಸಿದ್ದರು.

ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಎನ್ನುವರು ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಕೋರ್ಟ್ ಈ ಕೇಸ್ ದಾಖಲಿಸಿಕೊಳ್ಳುವ ಮುನ್ನ ಸಿಎಂ ಸಿದ್ದರಾಮಯ್ಯನವರ ವಾದ ಆಲಿಸಲು ಅವಕಾಶ ನೀಡಿದೆ. ಹೀಗಾಗಿ ಬಿಎನ್‌ಎಸ್ ಸೆಕ್ಷನ್ 223 ಅಡಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top